ಯೋಬು 13

ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.

Job 13:4 (UKJV) But all of you are forgers of lies, all of you are all physicians of no value.

2ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.

3ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.

4ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.

5ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.

6ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.

Kannada Bible (Old Version), Bible Society of India.