9ಎಡಗಡೆಯಲ್ಲಿ, ಆತನು ಕೆಲಸ ಮಾಡು ವಲ್ಲಿ ಆತನನ್ನು ನೋಡುವದಿಲ್ಲ; ಬಲಗಡೆಯಲ್ಲಿ ಆತನು ಅಡಗಿಸಿಕೊಳ್ಳುತ್ತಾನೆ, ನಾನು ಕಾಣುವದಿಲ್ಲ.
10ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
11ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು.
12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
13ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.