5ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು.
6ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು.
7ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
8ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ.
9ಎಡಗಡೆಯಲ್ಲಿ, ಆತನು ಕೆಲಸ ಮಾಡು ವಲ್ಲಿ ಆತನನ್ನು ನೋಡುವದಿಲ್ಲ; ಬಲಗಡೆಯಲ್ಲಿ ಆತನು ಅಡಗಿಸಿಕೊಳ್ಳುತ್ತಾನೆ, ನಾನು ಕಾಣುವದಿಲ್ಲ.