ಯೋಬು 24

ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.

Job 24:18 (UKJV) He is swift as the waters; their portion is cursed in the earth: he beholds not the way of the vineyards.

16ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು.

17ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.

18ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.

19ಹಿಮದ ನೀರನ್ನು ಒಣ ಭೂಮಿಯೂ ಬಿಸಿಲೂ ಹೀರಿಕೊಳ್ಳುವಂತೆ ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ.

20ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.

Kannada Bible (Old Version), Bible Society of India.