ಯೋಬು 24

ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.

Job 24:3 (UKJV) They drive away the ass of the fatherless, they take the widow's ox for a pledge.

1ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ?

2ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ.

3ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.

4ದರಿದ್ರನನ್ನು ಮಾರ್ಗದಿಂದ ತೊಲಗಿಸುತ್ತಾರೆ; ದೇಶದ ದೀನರು ಕೂಡಾ ಅಡಗಿಕೊಳ್ಳುತ್ತಾರೆ.

5ಇಗೋ, ಅವರು ಕಾಡುಕತ್ತೆಗಳ ಹಾಗೆ ತಮ್ಮ ಕೆಲಸಕ್ಕೆ ಹೊರಡುತ್ತಾರೆ. ಬೆಳಿಗ್ಗೆ ಕೊಳ್ಳೆ ಹುಡುಕುತ್ತಾರೆ; ಅರಣ್ಯವು ಅವರಿಗೂ ಮಕ್ಕಳಿಗೂ ಆಹಾರ ಕೊಡು ತ್ತದೆ.

Kannada Bible (Old Version), Bible Society of India.