6ಆ ರಾತ್ರಿಯನ್ನು ಅಂಧಕಾರವು ಮುತ್ತಲಿ, ಅದು ವರುಷದ ದಿವಸಗಳಲ್ಲಿ ಸಂತೋಷಪಡದಿರಲಿ; ತಿಂಗಳುಗಳ ಲೆಕ್ಕದಲ್ಲಿ ಸೇರದಿರಲಿ.
7ಇಗೋ, ಆ ರಾತ್ರಿಯು ಒಂಟಿಯಾಗಿರಲಿ; ಆನಂದ ಸ್ವರವು ಅದಕ್ಕೆ ಬಾರದಿರಲಿ.
8ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ.
9ಅದರ ಸಂಧ್ಯಾರುಣದ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದು ಕೊಳ್ಳಲೂ ಬಾರದಿರಲಿ; ಅದು ದಿನದ ಉದಯವನ್ನು ನೋಡದಿರಲಿ.
10ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.