ಯೋಬು 38

ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.

Job 38:11 (UKJV) And said, Until now shall you come, but no further: and here shall your proud waves be stayed?

9ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ

10ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.

11ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.

12ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?

13ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?

Kannada Bible (Old Version), Bible Society of India.