ಯೋಬು 42

ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.

Job 42:7 (UKJV) And it was so, that after the LORD had spoken these words unto Job, the LORD said to Eliphaz the Temanite, My wrath is kindled against you, and against your two friends: for all of you have not spoken of me the thing that is right, as my servant Job has.

5ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು.

6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.

7ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.

8ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.

9ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.

Kannada Bible (Old Version), Bible Society of India.