7ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು.
8ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.
9ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ.
10ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?
11ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ?