18ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
19ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.
20ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.