ಯೋವೇಲ್ 2

ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್‌ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.

Joel 2:3 (UKJV) A fire devours before them; and behind them a flame burns: the land is as the garden of Eden before them, and behind them a desolate wilderness; yea, and nothing shall escape them.

1ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.

2ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.

3ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್‌ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.

4ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ.

5ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ

Kannada Bible (Old Version), Bible Society of India.