9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
10ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
11ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
13ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.