21ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು.
22ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು.
23ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;
24ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
25ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.