24ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
25ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
26ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.
27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.