36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
37ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ.
38ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
39ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
40ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.