ಯೋಹಾನ 10

ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;

John 10:4 (UKJV) And when he puts forth his own sheep, he goes before them, and the sheep follow him: for they know his voice.

2ಆದರೆ ಬಾಗಲಿ ನಿಂದ ಒಳಗೆ ಬರುವವನು ಆ ಕುರಿಗಳ ಕುರುಬನಾಗಿ ದ್ದಾನೆ.

3ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.

4ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;

5ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.

6ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ.

Kannada Bible (Old Version), Bible Society of India.