5ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
6ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ.
7ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
8ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.