1ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು.
2ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
3ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
4ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು--
5ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.