7ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ.
8ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.
9ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.
10ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
11ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು.