25ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.
27ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.