ಯೋಹಾನ 16

ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.

John 16:2 (UKJV) They shall put you out of the synagogues: yea, the time comes, that whosoever kills you will think that he does God service.

1ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ.

2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.

3ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.

4ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.

Kannada Bible (Old Version), Bible Society of India.