24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
25ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.
26ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.