32ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.
33ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ.
34ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
35ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
36ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.