ಯೋಹಾನ 2

ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.

John 2:17 (UKJV) And his disciples remembered that it was written, The zeal of yours house has eaten me up.

15ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.

16ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.

17ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.

18ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.

19ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.

Kannada Bible (Old Version), Bible Society of India.