5ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
6ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.
7ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು.
8ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.
9ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು