6ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ
7ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು.
8ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು.
9ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ.
10ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು.