ಯೋಹಾನ 21

​ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--

John 21:1 (UKJV) After these things Jesus showed himself again to the disciples at the sea of Tiberias; and likewise showed he himself.

1​ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--

2ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.

3ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.

Kannada Bible (Old Version), Bible Society of India.