15ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
16ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
17ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
18ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
19ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.