20ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.
21ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
22ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.
23ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
24ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.