31ಆ ಸಮಯದಲ್ಲಿ ಆತನ ಶಿಷ್ಯರು ಆತನಿಗೆ--ಬೋಧಕನೇ, ಊಟ ಮಾಡು ಎಂದು ಬೇಡಿ ಕೊಂಡರು.
32ಆದರೆ ಆತನು ಅವರಿಗೆ--ನಿಮಗೆ ತಿಳಯದಿರುವ ಆಹಾರವು ನನಗೆ ಊಟಕ್ಕೆ ಇದೆ ಅಂದನು.
33ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು.
34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
35ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.