ಯೋಹಾನ 4

ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.

John 4:49 (UKJV) The nobleman says unto him, Sir, come down before my child die.

47ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.

48ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.

49ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.

50ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.

51ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.

Kannada Bible (Old Version), Bible Society of India.