ಯೋಹಾನ 4

ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.

John 4:51 (UKJV) And as he was now going down, his servants met him, and told him, saying, Your son lives.

49ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.

50ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.

51ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.

52ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು.

53ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.

Kannada Bible (Old Version), Bible Society of India.