ಯೋಹಾನ 5

ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.

John 5:4 (UKJV) For an angel went down at a certain season into the pool, and troubled the water: whosoever then first after the troubling of the water stepped in was made whole of whatsoever disease he had.

2ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.

3ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.

4ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.

5ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.

6ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.

Kannada Bible (Old Version), Bible Society of India.