66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
67ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು
68ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
69ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
70ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.