30ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
33ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
34ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.