11ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
12ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;
13ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.
14ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು.
15ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.