31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
32ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
33ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
34ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
35ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.