ಯೋಹಾನ 9

ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.

John 9:38 (UKJV) And he said, Lord, I believe. And he worshipped him.

36ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.

37ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.

38ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.

39ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.

40ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.

Kannada Bible (Old Version), Bible Society of India.