ಯೋಹಾನ 9

ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.

John 9:39 (UKJV) And Jesus said, For judgment I am come into this world, that they which see not might see; and that they which see might be made blind.

37ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.

38ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.

39ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.

40ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.

41ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು

Kannada Bible (Old Version), Bible Society of India.