ಯೆಹೋಶುವ 13

ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.

Joshua 13:15 (UKJV) And Moses gave unto the tribe of the children of Reuben inheritance according to their families.

13ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.

14ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.

15ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.

16ಅರ್ನೋನ್‌ ನದಿಯ ತೀರದ ಲ್ಲಿರುವ ಅರೋಯೇರ್‌ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು

17ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್‌ಬಾಳ್‌, ಬೆತ್ಬಾಳ್ಮೆಯೋನ್‌,

Kannada Bible (Old Version), Bible Society of India.