ಯೆಹೋಶುವ 14

ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.

Joshua 14:10 (UKJV) And now, behold, the LORD has kept me alive, as he said, these forty and five years, even since the LORD spoke this word unto Moses, while the children of Israel wandered in the wilderness: and now, lo, I am this day fourscore and five years old.

8ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.

9ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.

10ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.

11ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ.

12ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.

Kannada Bible (Old Version), Bible Society of India.