1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
2ಆದರೆ ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ಬಾಧ್ಯತೆ ಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು.
3ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?
4ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ; ನಾನು ಅವರನ್ನು ಕಳುಹಿಸುವೆನು. ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು, ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು.