1ಆಗ ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರ ದವರನ್ನೂ ಕರಿಸಿ ಅವರಿಗೆ--
2ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ.
3ನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ.
4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.