8ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾ ನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.
9ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು.
10ಇಬ್ಚಾನನು ಸತ್ತು ಬೇತ್ಲೆಹೇಮಿನಲ್ಲಿ ಹೂಣಲ್ಪಟ್ಟನು.
11ಅವನ ತರುವಾಯ ಜೆಬುಲೂನ್ಯನಾದ ಏಲೋ ನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು; ಅವನು ಹತ್ತು ವರುಷಗಳು ಇಸ್ರಾಯೇಲ್ಯರಿಗೆ ನ್ಯಾಯ ತೀರಿಸಿದನು.
12ಜೆಬುಲೂನ್ಯನಾದ ಏಲೋನನು ಸತ್ತು ಜೆಬುಲೂನ್ ದೇಶವಾದ ಅಯ್ಯಾಲೋನಿನಲ್ಲಿ ಹೂಣಲ್ಪಟ್ಟನು.