14ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.
15ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು.
16ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.
17ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.
18ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು. ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು.