29ಯೋವಾಷನ ಮಗನಾದ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.
30ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.
31ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು.
32ಯೋವಾಷನ ಮಗನಾದ ಗಿದ್ಯೋನನು ಒಳ್ಳೇ ವೃಧ್ಧಾಪ್ಯದಲ್ಲಿ ಸತ್ತು ಅಬೀಯೆಜೆರೀ ಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಣಿಡಲ್ಪಟ್ಟನು.
33ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್‌ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.