ವಿಲಾಪಗೀತಗಳು 1

ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.

Lamentations 1:2 (UKJV) She weeps sore in the night, and her tears are on her cheeks: among all her lovers she has none to comfort her: all her friends have dealt treacherously with her, they are become her enemies.

1ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!

2ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.

3ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.

4ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.

Kannada Bible (Old Version), Bible Society of India.