14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
16ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
17ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
18ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ.