6ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು.
7ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.
8ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ.
9ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು.
10ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು.