ಯಜ್ಞದೀಕ್ಷಾನಿರ್ಣಯ 11

ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು.

Leviticus 11:9 (UKJV) These shall all of you eat of all that are in the waters: whatsoever has fins and scales in the waters, in the seas, and in the rivers, them shall all of you eat.

7ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.

8ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ.

9ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು.

10ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು.

11ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು.

Kannada Bible (Old Version), Bible Society of India.